Wednesday October 11 2017

Follow on us:

Contact Us
    738

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರರಿದ್ದ ಬಸ್ ಮೇಲೆ ಕಲ್ಲು ತೂರಾಟ!

ನ್ಯೂಸ್ ಕನ್ನಡ ವರದಿ-(11.10.17): ಸದ್ಯ ಆಸ್ಟ್ರೇಲಿಯಾ ತಂಡವನ್ನು ಏಕದಿನ ಪಂದ್ಯಾಟದಲ್ಲಿ ಬಗ್ಗುಬಡಿದ ಭಾರತ ತಂಡ ಎರಡನೇ ಟಿ-20 ಪಂದ್ಯದಲ್ಲಿ ಹೀನಾಯ ಸೋಲನ್ನಪ್ಪಿತ್ತು. ನಿನ್ನೆ ಪಂದ್ಯ ಮುಗಿದ ಬಳಿಕ ಗೆಲುವಿನ ಸಂಭ್ರಮದಲ್ಲಿ ಕ್ರೀಡಾಂಗಣದಿಂದ ಹೋಟೆಲ್ ಗೆ ಬಸ್ ನಲ್ಲಿ ತೆರಳುತ್ತಿದ್ದ ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರರ ಮೇಲೆ ಗುವಾಹಟಿಯಲ್ಲಿ ಕಲ್ಲುತೂರಾಟ ನಡೆದಿದೆ. ಭಾರತ ತಂಡವು ಸೋತ ಕಾರಣದಿಂದ ಈ ರೀತಿಯಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಿಂದ ಹೋಟೆಲ್ಗೆ ತೆರಳುತ್ತಿದ್ದ ಆಸ್ಟ್ರೇಲಿಯಾ ತಂಡದ ಸದಸ್ಯರ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರಿಂದ ಟೀಂ ಆಸ್ಟ್ರೇಲಿಯಾದ ಆಟಗಾರರು ಬೆಚ್ಚಿಬಿದ್ದಿದ್ದಾರೆ. ಕಲ್ಲು ತೂರಾಟದ ಪರಿಣಾಮ ಬಸ್ನ ಕಿಟಕಿ ಗ್ಲಾಸುಗಳು ಪುಡಿಪುಡಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಆಟಗಾರನಿಗೂ ಯಾವುದೇ ರೀತಿಯ ಅಪಾಯವಾಗಿಲ್ಲ ಎಂದು ಆ್ಯರಾನ್ ಫಿಂಚ್ ಟ್ವೀಟ್ ಮಾಡಿದ್ದಾರೆ. ಘಟನೆ ಕುರಿತು ಸ್ಥಳೀಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಪ್ರಕರಣ ದಾಖಲಿಸಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ವಕ್ತಾರ ಹೇಳಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಅಪ್ರಾಪ್ತ ಬಾಲಕಿಯ ಮೇಲೆ ನಾಲ್ವರು ಯೋಧರಿಂದ ಸಾಮೂಹಿಕ ಅತ್ಯಾಚಾರ: ಒಡಿಶಾ ಉದ್ವಿಗ್ನ!

ಮುಂದಿನ ಸುದ್ದಿ »

ರಸ್ತೆ ಗುಂಡಿಗಳನ್ನು ಮುಚ್ಚಲಾಗದ ಸಿದ್ದರಾಮಯ್ಯ ನಪುಂಸಕ: ವಿವಾದಕ್ಕೆ ಕಾರಣವಾದ ಹೇಳಿಕೆ!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×