Friday January 12 2018

Follow on us:

Contact Us
    572

ಧವನ್‍ ಗೆ ಬಿಗ್ ಶಾಕ್!:2ನೇ ಟೆಸ್ಟ್ ಗೆ ತಂಡದಲ್ಲಿ ಅಚ್ಚರಿಯ ಬದಲಾವಣೆ

ನ್ಯೂಸ್ ಕನ್ನಡ(12-01-2018): ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಆಡುವ 11ರ ಬಳಗದಿಂದ ಶಿಖರ್ ಧವನ್‍ ಗೆ ಖೊಕ್ ನೀಡಲಾಗಿದ್ದು, ಅವರ ಸ್ಥಾನಕ್ಕೆ ಕರ್ನಾಟಕದ ಕೆ.ಎಲ್ ರಾಹುಲ್ ರವರನ್ನು ಆಯ್ಕೆಮಾಡಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಹೀನಾಯ ವೈಫಲ್ಯದ ಬಳಿಕ ಟೀಂ ಇಂಡಿಯಾ ಮತ್ತು ಆಯ್ಕೆ ಮಂಡಳಿಯ ಬಗ್ಗೆ ವ್ಯಾಪಕ ಟೀಕೆಗಳು ಕೇಳಿಬಂದ ಹಿನ್ನಲೆಯಲ್ಲಿ ಕೆಲವು ಆಟಗಾರರನ್ನು ತಂಡದಿಂದ ಹೊರಗಿಡಲು ಮಂಡಳಿ ನಿರ್ಧರಿಸಿದ್ದು, ಮೊದಲನೇ ಹಂತವಾಗಿ ಮ್ಯಾನೇಜ್ ಮೆಂಟ್ ಧವನ್ ಗೆ ದೊಡ್ಡ ಶಾಕ್ ನೀಡಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ವೈಫಲ್ಯ ಕಂಡಿದ್ದರು.ಅವರ ಜಾಗದಲ್ಲಿ ಕೆಎಲ್ ರಾಹುಲ್ ಆಡುವುದು ಬಹುತೇಕ ಖಚಿತವಾಗಿದೆ. ರೋಹಿತ್ ಶರ್ಮಾಗೆ ಮಂಡಳಿ ಇನ್ನೊಂದು ಅವಕಾಶ ನೀಡಿದ್ದು ಅವರು ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಬ್ಯಾಟ್ ಬೀಸಲಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ದ್ರಾವಿಡ್ ಹುಟ್ಟುಹಬ್ಬಕ್ಕೆ ಪುತ್ರ ಸಮಿತ್ ದ್ರಾವಿಡ್ ನೀಡಿದ ಗಿಫ್ಟ್ ಏನು ಗೊತ್ತೇ?

ಮುಂದಿನ ಸುದ್ದಿ »

ತಾನು ಗೆದ್ದುಕೊಂಡ 25ಲಕ್ಷರೂ.ಯನ್ನು ಕ್ಯಾನ್ಸರ್ ಆಸ್ಪತ್ರೆಗೆ ದಾನ ನೀಡಿದ ಪಿ.ವಿ ಸಿಂಧು!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×