Tuesday March 13 2018

Follow on us:

Contact Us
    362

ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆಗೈದ ಹೈಸ್ಕೂಲ್ ವಿದ್ಯಾರ್ಥಿನಿ!

ನ್ಯೂಸ್ ಕನ್ನಡ ವರದಿ-(13.3.18): ವಿಶ್ವಕಪ್ ಬಳಿಕ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಕ್ರೀಡಾಭಿಮಾನಿಗಳ ಗಮನ ಸೆಳೆಯಿತು. ಇದೀಗ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ 17 ವರ್ಷದ ಹೈಸ್ಕೂಲ್ ವಿದ್ಯಾರ್ಥಿನಿ ಜೆಮಿಮಾ ರಾಡ್ರಿಗಸ್ ಪಾದಾರ್ಪಣೆ ಮಾಡಿದ್ದಾರೆ. ಟಿ-ಟ್ವೆಂಟಿ ಕ್ರಿಕೆಟ್ ನಲ್ಲಿ ಉತ್ತಮ ಸಆಧನೆ ಮಾಡಿರುವ ಜೆಮಿಮಾ ತಂಡದ ಆಯ್ಕೆದಾರರನ್ನು ತಮ್ಮತ್ತ ಸೆಳೆದುಕೊಂಡಿದ್ದಾರೆ. ನಿನ್ನೆ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ಪರ ಚೊಚ್ಚಲ ಕ್ರಿಕೆಟ್ ಆಡಿದರು.

ಜೆಮಿಮಾ ತನ್ನ 12ನೇ ವರ್ಷದಲ್ಲಿಯೇ ಮುಂಬೈನ ಅಂಡರ್ 19 ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದರು. ಕೇವಲ ಕ್ರಿಕೆಟ್ ಮಾತ್ರವಲ್ಲದೇ ಬಾಸ್ಕೆಟ್ ಬಾಲ್, ಹಾಕಿ ಕ್ರೀಡೆಗಳಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ. ಅಂಡರ್ 17 ಮತ್ತು ಅಂಡರ್ 19 ಹಾಕಿ ತಂಡಕ್ಕೂ ಜೆಮಿಮಾ ಆಯ್ಕೆಯಾಗಿದ್ದರು ಎನ್ನುವುದು ಇನ್ನೂ ವಿಶೇಷ. ಇವರ ತಂದೆ ಇವಾನ್ ಕ್ಲಬ್ ಗಳಲ್ಲಿ ಕ್ರಿಕೆಟ್ ಆಡುತ್ತಿದ್ದು, ಮಗಳ ಕ್ರೀಡಾ ಬದುಕಿಗೆ ಒತ್ತಾಸೆಯಾಗಿ ನಿಂತಿದ್ದಾರೆ. ಈಗಾಗಲೇ ಚೊಚ್ಚಲ ಪಂದ್ಯವಾಡಿರುವ ಜೆಮಿಮಾ ಕ್ರೀಡಾ ಬದುಕು ಬೆಳಗಲಿ ಎಂದು ಹಾರೈಸೋಣ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ನಿಮ್ಮ ಮಗುವಿನ ಹೆಸರು ಬದಲಾಯಿಸದಿದ್ದರೆ ನಾವೇ ಬೇರೆ ಹೆಸರಿಡುತ್ತೇವೆಂದ ಸರಕಾರ!

ಮುಂದಿನ ಸುದ್ದಿ »

ನಮ್ಮ ಸಿದ್ದರಾಮಯ್ಯ ದೇಶದಲ್ಲೇ ನಂ.1 ಮುಖ್ಯಮಂತ್ರಿ!: ಎಚ್.ಸಿ.ಮಹದೇವಪ್ಪ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×