Thursday August 10 2017

Follow on us:

Contact Us
    518

ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು

ಅಮರಾವತಿ: ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಆ.10 ರಂದು ಆಂಧ್ರಪ್ರದೇಶ ಸರ್ಕಾರದ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.  ವಿಜಯವಾಡದಲ್ಲಿರುವ ಭೂ ಆಡಳಿತದ ಮುಖ್ಯ ಆಯುಕ್ತರ ಕಚೇರಿಯಲ್ಲಿ  ಹಿರಿಯ ಐಎಎಸ್ ಅಧಿಕಾರಿ ಎಂ ಜಗನ್ನಾಥಂ ಸಮ್ಮುಖದಲ್ಲಿ ಪಿವಿ ಸಿಂಧು ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದು, ಗ್ರೂಪ್-1 ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಅವರಿಗೆ ಗ್ರೂಪ್-1 ಅಧಿಕಾರಿಯಾಗಿ ನೇಮಕ ಮಾಡಲು ಮೇ ತಿಂಗಳಲ್ಲಿ ರಾಜ್ಯ ಸಾರ್ವಜನಿಕ ಸೇವೆಗಳ ಕಾಯ್ದೆಗೆ ತಿದ್ದುಪಡಿ ತಂದು ಮಸೂದೆಯನ್ನು ಅಂಗೀಕರಿಸಲಾಗಿತ್ತು. ನಂತರ ಜುಲೈ 27 ರಂದು ಆಂಧ್ರಪ್ರದೇಶ ಸರ್ಕಾರ ಪಿವಿ ಸಿಂಧು ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಸ್ವತಃ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೇ ನೇಮಕಾತಿ ಪತ್ರವನ್ನ ಸಿಂಧು ಅವರಿಗೆ ನೀಡಿದ್ದರು. ಸಿಂಧು ಅವರು ಎಲ್ಲಾ ಅಗತ್ಯ ದಾಖಲೆಗಳನ್ನು ಒದಗಿಸಿ ಕರ್ತವ್ಯಕ್ಕೆ ಹಾಜರಾಗಲು ಒಂದು ತಿಂಗಳು ಕಾಲಾವಕಾಶ ನೀಡಲಾಗಿತ್ತು.

ಇದೇ ವೇಳೆ ಮಾತನಾಡಿದ ಸಿಂಧು,ಆಂಧ್ರಪ್ರದೇಶ ಸರ್ಕಾರದ ಭಾಗವಾಗಿರೋದು ಸಂತಸದ ವಿಷಯ. ನನ್ನ ಕೆಲಸಕ್ಕೆ ಸೂಕ್ತ ನ್ಯಾಯ ಒದಗಿಸುತ್ತೇನೆ ಅಂತ ಭರವಸೆ ನೀಡಿದ್ದಾರೆ. ಕರ್ತವ್ಯದ ಜೊತೆಗೆ ಬ್ಯಾಡ್ಮಿಂಟನ್ ಆಟವನ್ನು ಮುಂದುವರೆಸುವುದಾಗಿ ಹೇಳಿ ಸಿಂಧು ಹೇಳಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಆಪರೇಷನ್ ಥಿಯೇಟರ್ ನಂತಿರುವ ರೆಸ್ಟೋರೆಂಟ್ ನ 15 ಚಿತ್ರಗಳು!

ಮುಂದಿನ ಸುದ್ದಿ »

ಈ ಬಾರಿ ವಿಶ್ವವಿದ್ಯಾನಿಲಯಗಳಿಗೆ ಗಾಂಧಿ ಜಯಂತಿಯ ರಜೆ ಇಲ್ಲ!

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×