Saturday November 11 2017

Follow on us:

Contact Us
    160

ಮಹೇಂದ್ರ ಸಿಂಗ್ ಧೋನಿಯ ಕುರಿತು ಅಸೂಯೆಪಡುವವರೇ ಹೆಚ್ಚಾಗಿದ್ದಾರೆ: ರವಿಶಾಸ್ತ್ರಿ

ನ್ಯೂಸ್ ಕನ್ನಡ(11.11.2017): ಭಾರತ ತಂಡದ ಮಾಜಿ ನಾಯಕ, ಈಗಲೂ ಅತ್ಯುತ್ತಮ ಫಾರ್ಮ್‍ನಲ್ಲಿರುವ ಮಹೇಂದ್ರ ಸಿಂಗ್ ಧೋನಿ ಕುರಿತಾದಂತೆ ಮಾಜಿ ಕ್ರಿಕೆಟ್ ಆಟಗಾರರು ಸೇರಿದಂತೆ ಹಲವರು ನಿವೃತ್ತಿಯ ಮಾತುಗಳನ್ನಾಡುತ್ತಿದ್ದು, ಈ ಕುರಿತು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಧೋನಿಗೆ ಬೆಂಬಲ ನೀಡಿ ಮಾತನಾಡಿದ ಬೆನ್ನಲ್ಲೇ ಭಾರತ ತಂಡದ ಕೋಚ್ ರವಿಶಾಸ್ತ್ರಿ ಕೂಡಾ ಧೋನಿ ಬೆಂಬಲಕ್ಕೆ ನಿಂತಿದ್ದಾರೆ. ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ದೋನಿ ಅವರ ಸುತ್ತ ಅಸೂಯೆ ಪಡುವ ಜನರೆ ಹೆಚ್ಚಾಗಿದ್ದಾರೆ ಎಂದು ಮುಖ್ಯ ಕೋಚ್‌ ರವಿಶಾಸ್ತ್ರಿ ಹೇಳಿದ್ದಾರೆ.

ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ‘ದೋನಿ ಒಬ್ಬ ಉತ್ತಮ ಆಟಗಾರ ಹಾಗೂ ಯಶಸ್ವಿ ನಾಯಕ. ಆದರೆ ಅವರ ಸುತ್ತಲೂ ಅಸೂಯೆ ಪಡುವವರೇ ಇದ್ದಾರೆ. ಅವರು ದೋನಿ ವೃತ್ತಿ ಜೀವನ ಅಂತ್ಯಗೊಳಿಸುವುದನ್ನೇ ಕಾದು ನೋಡುತ್ತಿದ್ದಾರೆ. ಕ್ರಿಕೆಟ್‌ ಭವಿಷ್ಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ದೋನಿ ಹೊಂದಿದ್ದಾರೆ’ ಎಂದು ಅಭಿಪ್ರಾಯಪಟ್ಟಿದ್ದಾರೆ. ದೋನಿ ಅವರ ವಿರುದ್ಧ ಕೇಳಿ ಬಂದಿರುವ ಟೀಕೆಗಳು ಅವರ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ತಂಡದಲ್ಲಿ ದೋನಿಗೆ ನೀಡಿರುವ ಸ್ಥಾನ ಹಾಗೆಯೇ ಮುಂದುವರಿಯುತ್ತದೆ ಎಂದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಡೊನಾಲ್ಡ್ ಟ್ರಂಪ್ ವಿಶ್ವಶಾಂತಿಯನ್ನು ಹದಗೆಡಿಸುವ ಓರ್ವ ವಿಧ್ವಂಸಕ ವ್ಯಕ್ತಿ: ಉ.ಕೊರಿಯಾ

ಮುಂದಿನ ಸುದ್ದಿ »

ಸುನ್ನತ್(ಮುಂಜಿ) ಕರ್ಮದ ಬಗ್ಗೆ ಅಪಸ್ವರ ಖಂಡನೀಯ: ಎಸ್ಸೆಸ್ಸೆಫ್

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×