Thursday January 11 2018

Follow on us:

Contact Us
    389

ದ್ರಾವಿಡ್ ಹುಟ್ಟುಹಬ್ಬಕ್ಕೆ ಪುತ್ರ ಸಮಿತ್ ದ್ರಾವಿಡ್ ನೀಡಿದ ಗಿಫ್ಟ್ ಏನು ಗೊತ್ತೇ?

ನ್ಯೂಸ್ ಕನ್ನಡ ವರದಿ-(11.01.18): ಬೆಂಗಳೂರು: ಕ್ರಿಕೆಟ್ ಜಗತ್ತಿನಲ್ಲಿಯೇ ಅಜಾತಶತ್ರು ಎಂದೆನಿಸಿಕೊಂಡ ‘ದಿ ವಾಲ್’ ಎಂದೇ ಖ್ಯಾತರಾಗಿರುವ ರಾಹುಲ್ ದ್ರಾವಿಡ್ ಗೆ ಪುತ್ರ ಸಮಿತ್ ದ್ರಾವಿಡ್ ತಂದೆಯ ಹುಟ್ಟುಹಬ್ಬಕ್ಕೆ ಹೊಸ ಗಿಫ್ಟ್ ಒಂದನ್ನು ನೀಡಿದ್ದಾರೆ.

ಸದ್ಯ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಮಾರ್ಗದರ್ಶನ ನೀಡುತ್ತಿರುವ ರಾಹುಲ್ ದ್ರಾವಿಡ್ ಇಂದು ತನ್ನ 45 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇನ್ನು ಪುತ್ರ ಸಮಿತ್ ದ್ರಾವಿಡ್ ತಂದೆಯ ಹುಟ್ಟುಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಕ್ರಿಕೆಟ್ ಲೋಕದಲ್ಲಿ ಮಿಂಚುತ್ತಿದ್ದ ‘ ವಾಲ್ ‘ ಖ್ಯಾತಿಯ ರಾಹುಲ್ ಹಾಗೂ ಮಾಜಿ ಕ್ರಿಕೆಟಿಗ, ಲೆಗ್ ಸ್ಪಿನ್ನರ್ ಸುನಿಲ್ ಜೋಶಿ ಅವರ ಪುತ್ರರಿಬ್ಬರು ಕ್ರಿಕೆಟ್ ಮೈದಾನದಲ್ಲಿ ಅಧ್ಬುತ ಬ್ಯಾಟಿಂಗ್ ಪ್ರದರ್ಶನ ನಡೆಸುತ್ತಿದ್ದಾರೆ. ಇವರಿಬ್ಬರು ಕೆ ಎಸ್,ಸಿಎ ಆಯೋಜಿಸಿರುವ ಬಿಟಿಆರ್ ಕಪ್ ಅಂಡರ್-14 ಟೂರ್ನಿಯಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ.

‘ಮಲ್ಯ ಆದಿತಿ ಇಂಟರ್ ನ್ಯಾಷನಲ್’ ಸ್ಕೂಲ್ ಪರ ಆಡಿರುವ ಸಮಿತ್ ದ್ರಾವಿಡ್ 150 ರನ್ ಬಾರಿಸಿದರೆ, ಆರ್ಯನ್ ಜೋಶಿ 154 ರನ್ ಬಾರಿಸಿದರು. ಇವರಿಬ್ಬರ ಸ್ಫೋಟಕ ಆಟದ ನೆರವಿನಿಂದ ಎದುರಾಳಿ ವಿವೇಕಾನಂದ ಶಾಲೆಯ ತಂಡವನ್ನು ಕೇವಲ 88 ರನ್ ಗಳಿಗೆ ಕಟ್ಟಿ ಹಾಕಿ ಗೆಲುವು ಸಾಧಿಸಿತು.
ಇನ್ನು 150 ರನ್ ಬಾರಿಸಿರುವ ಸಮಿತ್ ತನ್ನ ತಂದೆಗೆ ಹುಟ್ಟುಹಬ್ಬದ ಒಂದು ದಿನ ಮುಂಚಿತವಾಗಿ ತಂದೆಗೆ ನೀಡಿರುವ ಭರ್ಜರಿ ಗಿಫ್ಟ್ ಆಗಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕೋಡಿಜಾಲ್ ಮಸೀದಿಗೆ ಭೇಟಿ ನೀಡಿ ಸಾಮರಸ್ಯ ಮೆರೆದ ಅಯ್ಯಪ್ಪ ಭಕ್ತರು!

ಮುಂದಿನ ಸುದ್ದಿ »

ಕರ್ನಾಟಕ ಮುಖ್ಯಮಂತ್ರಿ ಅಭಿವೃದ್ಧಿ ಯಾತ್ರೆ ಬ್ಯಾನರ್ ಗೆ ಬೆಂಕಿ ಪ್ರಕರಣ: ಕಿಡಿಗೇಡಿಗಳ ಬಂಧನಕ್ಕೆ ಯುವ ಕಾಂಗ್ರೆಸ್ ಗಡುವು

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×