Monday December 4 2017

Follow on us:

Contact Us
    587

ಜೋ ರೂಟ್ ಅಥವಾ ವಿರಾಟ್ ಕೊಹ್ಲಿ, ನಿಮ್ಮ ಫೇವರಿಟ್ ಕ್ರಿಕೆಟಿಗ ಯಾರು?

ನ್ಯೂಸ್ ಕನ್ನಡ ವರದಿ-(04.12.17): ವಿರಾಟ್ ಕೊಹ್ಲಿ ಈಗ ವಿಶ್ವದ ಅದ್ವಿತೀಯ ಬ್ಯಾಟ್ಸ್ ಮನ್ ಎಂಬುವುದರಲ್ಲಿ ಯಾವುದೇ ಸಂಶಯವಿಲ್ಲ. ಸಚಿನ್ ತೆಂಡೂಲ್ಕರ್ ವಿಶ್ವ ಕ್ರಿಕೆಟ್ ನಿಂದ ನಿವೃತ್ತಿಯಾದ ಸಂದರ್ಭದಲ್ಲಿ ಅವರ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅಂದಾಜಿಸಲಾಗಿತ್ತು. ಆದರೆ ಇದೀಗ ವಿರಾಟ್ ಕೊಹ್ಲಿಯ ಬೆಳವಣಿಗೆಯನ್ನು ನೋಡುತ್ತಿದ್ದರೆ, ಸಚಿನ್ ಗೆ ಸರಿಸಮಾನ ಸ್ಥಾನವನ್ನು ಪಡೆಯಲು ಯೋಗ್ಯರಾಗಿದ್ದಾರೆ ಎಂದು ಅನಿಸುತ್ತದೆ. ವಿರಾಟ್ ಕೊಹ್ಲಿಗೆ ಭಾರತದಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಅಷ್ಟೇ ಏಕೆ, ಹಲವು ದೇಶಗಳ ಕ್ರಿಕೆಟಿಗರು ಕೂಡಾ ಇವರ ಕುರಿತು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ.

ಸಾಂಪ್ರದಾಯಿಕ ಎದುರಾಳಿಯಾಗಿರುವ ಪಾಕಿಸ್ತಾನದ ಆಟಗಾರರು ಕೂಡಾ ವಿರಾಟ್ ಕೊಹ್ಲಿಯನ್ನು ಪ್ರಶಂಸಿಸುತ್ತಾರೆ ಹಾಗೂ ಅವರೊಂದಿಗೆ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ. ಮೊನ್ನೆ ತಾನೇ ಟಿವಿ ಶೋ ಒಂದರಲ್ಲಿ ಪಾಕಿಸ್ತಾನಿ ಕ್ರಿಕೆಟ್ ನಾಯಕ ಸರ್ಫರಾಝ್ ರೊಂದಿಗೆ ಇಂಗ್ಲೆಂಡ್ ನ ಜೋ ರೂಟ್ ಮತ್ತು ಭಾರತದ ವಿರಾಟ್ ಕೊಹ್ಲಿ, ಇವರಿಬ್ಬರ ನಡುವೆ ನಿಮಗೆ ಇಷ್ಟವಿರುವ ಆಟಗಾರ ಯಾರು ಎಂದು ಕೇಳಿದಾಗ, ವಿರಾಟ್ ಕೊಹ್ಲಿ ಎಂದು ಉತ್ತರ ನೀಡಿದರು. ಬಳಿಕ ಮಾತನಾಡಿದ ಅವರು, ಕೇವಲ ಒಂದು ಕ್ಷೇತ್ರದಲ್ಲಿ ಅಲ್ಲ, ಬ್ಯಾಟಿಂಗ್, ಕ್ಷೇತ್ರರಕ್ಷಣೆ, ಫಿಟ್ನೆಸ್ ಎಲ್ಲದರಲ್ಲೂ ವಿರಾಟ್ ಕೊಹ್ಲಿಯೇ ನನ್ನ ಫೇವರಿಟ್ ಎಂದು ಹೇಳಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ರಾಮ ಮಂದಿರ ಅಯೋಧ್ಯೆಯಲ್ಲೇ ನಿರ್ಮಿಸುತ್ತೇವೆ ಎನ್ನಲು ಭಾಗವತ್‌‌ ಸುಪ್ರೀಂಕೋರ್ಟ್‌ ಜಡ್ಜಾ ?!

ಮುಂದಿನ ಸುದ್ದಿ »

ಮೈಸೂರಿನಲ್ಲಿ ಕೋಮುಗಲಭೆಯೆಬ್ಬಿಸಲು ಪ್ರತಾಪಸಿಂಹಗೆ ಸುಪಾರಿ ಕೊಟ್ಟರೇ ಅಮಿತ್ ಶಾ?

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×