Monday October 9 2017

Follow on us:

Contact Us
    336

ಗಂಗೂಲಿಯ ತ್ಯಾಗದ ಕಾರಣದಿಂದಲೇ ಧೋನಿಯ ಭವಿಷ್ಯ ಉಜ್ವಲವಾಗಿದೆ: ಸೆಹ್ವಾಗ್

ನ್ಯೂಸ್ ಕನ್ನಡ ವರದಿ-(09.10.17): ಭಾರತ ತಂಡದ ಮಾಜಿ ನಾಯಕ ಹಾಗೂ ಸ್ಪೋಟಕ ಬ್ಯಾಟ್ಸ್ ಮನ್  ಮಹೇಂದ್ರ ಸಿಂಗ್ ದೋನಿ ಭವ್ಯ ಭವಿಷ್ಯಕ್ಕೆ ಟೀಂ ಇಂಡಿಯಾ ತಂಡದ ಮಾಜಿ ಕಪ್ತಾನ ಸೌರವ್ ಗಂಗೂಲಿ ತ್ಯಾಗ ಕಾರಣ ಎಂದು ಮಾಜಿ ಆರಂಭಿಕ ಬ್ಯಾಟ್ಸ್ ಮನ್ ವಿರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ನನಗಾಗಿ ಗಂಗೂಲಿ ತಮ್ಮ ಆರಂಭಿಕನ ಸ್ಥಾನವನ್ನು ಹಲವು ಬಾರಿ ತ್ಯಾಗ ಮಾಡಿದ್ದಾರೆ. ಇನ್ನು ಹಲವಾರು ಯುವಕರನ್ನು ಬೆಳೆಸಲು ತಮ್ಮ ಬ್ಯಾಟಿಂಗ್ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ದೋನಿಯ ವಿಷಯದಲ್ಲೂ ಹೀಗೆಯೇ ಆಗಿದೆ. ಒಂದು ವೇಳೆ ಗಂಗೂಲಿ ಅದನ್ನು ಮಾಡದಿದ್ದರೆ ದೋನಿಯ ಪರಿಸ್ಥಿತಿ ಹೀಗಿರುತ್ತಿರಲಿಲ್ಲ ಎಂದು ಸೆಹ್ವಾಗ್ ಟಿವಿ ಸಂದರ್ಶನದಲ್ಲಿ ಹೇಳಿದ್ದಾರೆ.

ಟೀಂ ಇಂಡಿಯಾಗೆ ಗಂಗೂಲಿ ನಾಯಕರಾಗಿದ್ದ ಸಂದರ್ಭದಲ್ಲಿ ತಂಡದ ಬ್ಯಾಟಿಂಗ್ ಕ್ರಮಾಂಕದಲ್ಲಿ ಕೆಲವೊಂದು ಪ್ರಯೋಗಗಳನ್ನು ಮಾಡಲಾಗುತ್ತಿತ್ತು. ಪಾಕಿಸ್ತಾನದ ವಿರುದ್ಧ ಆ ಏಕದಿನ ಪಂದ್ಯದಲ್ಲಿ ಧೋನಿಗೆ ಅವಕಾಶ ನೀಡಲು ಗಂಗೂಲಿ ಅವರನ್ನು 3ನೇ ಕ್ರಮಾಂಕದಲ್ಲಿ ಕಳಿಸಲು ತೀರ್ಮಾನಿಸಿದರು ಅದರಿಂದಾಗಿಯೇ ಧೋನಿ ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಯಿತು ಎಂದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ದೇಶರಕ್ಷಣೆಗಾಗಿ ಪ್ರತಿಯೊಬ್ಬ ಹಿಂದು ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಬೇಕು: ಮುತಾಲಿಕ್

ಮುಂದಿನ ಸುದ್ದಿ »

ರಾಜಕೀಯ ಪ್ರವೇಶದ ಕುರಿತು ನಟ ಯಶ್ ಹೇಳಿದ್ದೇನು ಗೊತ್ತೇ?

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×