Monday August 7 2017

Follow on us:

Contact Us
    227

ಶ್ರೀಶಾಂತ್ ವಿರುದ್ಧದ ನಿಷೇಧ ತೆರವುಗೊಳಿಸುವಂತೆ ಬಿಸಿಸಿಐಗೆ ಕೇರಳ ಹೈಕೋರ್ಟ್ ಸೂಚನೆ

ಕೊಚ್ಚಿಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಶ್ರೀಶಾಂತ್‌ಗೆ ವಿಧಿಸಿರುವ ಆಜೀವ ನಿಷೇಧ ಶಿಕ್ಷೆಯನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಸೋಮವಾರ ಆದೇಶಿಸಿದೆ. 2013ರ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾವಳಿಯಲ್ಲಿ ಸ್ಪಾಟ್ ಫಿಕ್ಸಿಂಗ್‌ನಲ್ಲಿ ತೊಡಗಿದ್ದ ಆರೋಪದ ಮೇಲೆ ರಾಜಸ್ಥಾನ ರಾಯಲ್ಸ್ ತಂಡದ ಮಾಜಿ ಆಟಗಾರ ಶ್ರೀಶಾಂತ್ ಅವರ ಮೇಲೆ ಅಜೀವ ನಿಷೇಧ ಹೇರಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆದೇಶ ಹೊರಡಿಸಿತ್ತು.

ಈ ಹಿಂದೆ ಶ್ರೀಶಾಂತ್‌ ನಿಷೇಧ ತೆರವು ಕೋರಿ ಬಿಸಿಸಿಐಗೂ ಮನವಿ ಮಾಡಿದ್ದರು. ಪರಿಶೀಲನೆ ನಡೆಸಿದ್ದ ಬಿಸಿಸಿಐ, ಸ್ಪರ್ಧಾತ್ಮಕ ಕ್ರಿಕೆಟ್‌ನ ಯಾವುದೇ ಮಾದರಿಯಲ್ಲಿಯೂ ಆಡಲು ಶ್ರೀಶಾಂತ್‌ಗೆ ಅವಕಾಶ ಇಲ್ಲ. ಅವರಿಗೆ ವಿಧಿಸಲಾಗಿರುವ  ಆಜೀವ ನಿಷೇಧ ಶಿಕ್ಷೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವ ಮಾತಿಲ್ಲ ಎಂದು ಸ್ಪಷ್ಟಪಡಿಸಿತ್ತು. ಐಪಿಎಲ್‌ ಆರನೇ ಆವೃತ್ತಿಯ ವೇಳೆ ಸ್ಪಾಟ್‌ ಫಿಕ್ಸಿಂಗ್‌ ನಡೆಸಿದ ರಾಜಸ್ತಾನ ರಾಯಲ್ಸ್‌ ತಂಡದ ವೇಗಿ ಎಸ್‌. ಶ್ರೀಶಾಂತ್‌ ವಿರುದ್ಧ 2013ರ ಸೆಪ್ಟೆಂಬರ್‌ನಲ್ಲಿ ಬಿಸಿಸಿಐ ಆಜೀವ ನಿಷೇಧ ಶಿಕ್ಷೆ ಹೇರಿತ್ತು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಅನುಷ್ಕಾ ಶೆಟ್ಟಿಯೊಂದಿಗಿನ ಮದುವೆ ಗಾಸಿಪ್: ಪ್ರಭಾಸ್ ಹೇಳಿದ್ದೇನು ಗೊತ್ತೇ?

ಮುಂದಿನ ಸುದ್ದಿ »

ಫ್ಯಾನ್ ಗೆ ನೇಣುಹಾಕಿಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ!

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×