Tuesday November 14 2017

Follow on us:

Contact Us
    298

ಸುರೇಶ್ ರೈನಾ, ಯುವರಾಜ್ ಸಿಂಗ್ ರನ್ನು ಭಾರತ ತಂಡಕ್ಕೆ ಮರಳಿ ಕರೆತನ್ನಿ: ಸುನೀಲ್ ಗಾವಸ್ಕರ್

ನ್ಯೂಸ್ ಕನ್ನಡ ವರದಿ(14.11.2017): ನ್ಯೂಜಿಲೆಂಡ್ ವಿರುದ್ಧ ಸರಣಿ ಗೆಲುವಿನ ನಂತರ ಭಾರತ ಕ್ರಿಕೆಟ್ ತಂಡ ಇದೀಗ ಶ್ರೀಲಂಕಾ ವಿರುದ್ಧ ತವರಿನಲ್ಲಿ ಮತ್ತೊಂದು ಸರಣಿಗೆ ಸಿದ್ಧವಾಗಿದ್ದು, ಪೂರ್ವತಯಾರಿ ನಡೆಸುತ್ತಿದೆ. ಈ ಸಂದರ್ಭದಲ್ಲಿ ಭಾರತ ತಂಡದ ಮಾಜಿ ಕಪ್ತಾನ, ಹಿರಿಯ ಕ್ರಿಕೆಟ್ ದಂತಕಥೆ ಸುನೀಲ್ ಗವಾಸ್ಕರ್ ಭಾರತೀಯ ಕ್ರಿಕೆಟ್ ಮಂಡಳಿಗೆ, ಆಯ್ಕೆದಾರರಿಗೆ ಹೊಸ ಸಲಹೆ ನೀಡಿದ್ದಾರೆ.

ಭಾರತೀಯ ಕ್ರಿಕೆಟ್ ತಂಡವು ಆಕ್ರಮಣಕಾರಿ ಆಟವನ್ನು ಮಿಸ್ ಮಾಡಿಕೊಳ್ಳುತ್ತಿದೆ. ಹಾಗಾಗಿ ತಂಡಕ್ಕೆ ರೈನಾ ಹಾಗೂ ಯುವಿ ಅವರನ್ನು ವಾಪಾಸ್ ಕರೆ ತರುವಂತೆ ಅವರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ವಿವರ ಚೆಲ್ಲಿದ ಗವಾಸ್ಕರ್, ‘ವಿರಾಟ್ ಕೋಹ್ಲಿ ನಾಯಕತ್ವದಡಿಯಲ್ಲಿ ಭಾರತ ತಂಡ ಸತತ ಸರಣಿ ಗೆಲುವುಗಳನ್ನು ದಾಖಲಿಸಿರಬಹುದು. ಆದರೆ ಆರಂಭಿಕ ಆಟಗಾರರು ವಿಫಲರಾದರೆ ಆಗ ತಂಡದ ಮಧ್ಯಮ ಕ್ರಮಾಂಕದ ಆಟಗಾರರು ಬಹಳಷ್ಟು ಒತ್ತಡ ಎದುರಿಸುತ್ತಿದ್ದಾರೆ. ಆರಂಭಿಕರು ವಿಫಲರಾದರೆ ಸ್ವತ: ನಾಯಕ ಕೋಹ್ಲಿ ಅಥವಾ ಧೋನಿ ಅವರೇ ಕಷ್ಟಪಡಬೇಕಾಗುತ್ತದೆ, ಮಧ್ಯಮ ಕ್ರಮಾಂಕದಲ್ಲಿ ಎಡಗೈ ಬ್ಯಾಟ್ಸ್‌ಮನ್‌ಗಳ ಅಗತ್ಯವಿದೆ. ಹಾಗೆಯೇ ರೈನಾ ಅಥವಾ ಯುವಿ ಬೌಲಿಂಗ್ ಜವಾಬ್ದಾರಿಯನ್ನೂ ತಕ್ಕಷ್ಟು ನಿರ್ವಹಿಸುತ್ತಾರೆ ಮತ್ತು ಅವರ ಕ್ಷೇತ್ರರಕ್ಷಣೆಯೂ ಅತ್ಯುತ್ತಮ ಗುಣಮಟ್ಟದಲ್ಲಿದೆ’ ಎಂದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಹಾರ್ದಿಕ್ ಯಾವ ತಪ್ಪೂ ಮಾಡಿಲ್ಲ, ಲೈಂಗಿಕತೆಯೆನ್ನುವುದು ಮೂಲಭೂತ ಹಕ್ಕು: ಜಿಗ್ನೇಶ್ ಮೆವಾನಿ

ಮುಂದಿನ ಸುದ್ದಿ »

ಪಾಕಿಸ್ತಾನ: ಕೋಳಿಯ ಮೇಲೆ ಅತ್ಯಾಚಾರವೆಸಗಿದ ಬಾಲಕನ ಬಂಧನ!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×