Monday December 4 2017

Follow on us:

Contact Us
    371

ಶ್ರೀಲಂಕಾ ವಿರುದ್ಧ ಟಿ-20 ಸರಣಿಯಲ್ಲಿ ಕೊಹ್ಲಿಗೆ ವಿಶ್ರಾಂತಿ: ಮುಹಮ್ಮದ್ ಸಿರಾಜ್ ಗೆ ಸ್ಥಾನ

ನ್ಯೂಸ್ ಕನ್ನಡ ವರದಿ-(04.12.17): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯವರು ಸದ್ಯ ಅದ್ಭುತ ಫಾರ್ಮ್‍ನಲ್ಲಿದ್ದಾರೆ. ಆದರೆ ಮೊನ್ನೆ ತಾನೇ ಬಿಡುವಿರದ ಕ್ರಿಕೆಟ್ ವೇಳಾಪಟ್ಟಿಯ ಕುರಿತು ವಿರಾಟ್ ಕೊಹ್ಲಿ ಬಿಸಿಸಿಐ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದರು. ಇದೀಗ ಬಿಸಿಸಿಐಯು ಶ್ರೀಲಂಕಾ ವಿರುದ್ಧದ ಟಿ-20 ಪಂದ್ಯಾಟಕ್ಕೆ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಉದಯೋನ್ಮುಖ ಬೌಲರ್ ಹೈದರಾಬಾದ್ ಮೂಲದ ಮುಹಮ್ಮದ್ ಸಿರಾಜ್ ಗೆ ಸ್ಥಾನವನ್ನು ನೀಡಲಾಗಿದೆ.

ಲಂಕಾ ವಿರುದ್ಧದ ಟಿ20ಗೆ ರೋಹಿತ್ ಶರ್ಮಾ ನಾಯಕರಾಗಿದ್ದು, ಕೆಎಲ್ ರಾಹುಲ್, ಶ್ರೇಯಸ್ ಐಯ್ಯರ್, ಮನಿಷ್ ಪಾಂಡೆ, ದಿನೇಶ್ ಕಾರ್ತಿಕ್, ಎಂಎಸ್ ಧೋನಿ, ಹಾರ್ದಿಕ್ ಪಾಂಡೆ, ವಾಷಿಂಗ್ಟನ್ ಸುಂದರ್, ಯಜ್ವೇಂದ್ರ ಚಹಲ್, ಕುಲದೀಪ್ ಯಾದವ್, ದೀಪಕ್ ಹೂಡಾ, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಬೆಸಿಲ್ ತಂಪಿ, ಜಯದೇವ್ ಉನದ್ಕಟ್ ಅವರು ಸ್ಥಾನ ಪಡೆದಿದ್ದಾರೆ.
ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೂ ಭಾರತ ತಂಡವನ್ನು ಪ್ರಕಟಿಸಿದ್ದು, ವಿರಾಟ್ ಕೊಹ್ಲಿ(ನಾಯಕ), ಕೆಎಲ್ ರಾಹುಲ್, ಮುರಳಿ ವಿಜಯ್, ಶಿಖರ್ ಧವನ್, ಚೇತೇಶ್ವರ್ ಪೂಜಾರಾ, ಅಜಿಂಕ್ಯಾ ರಹಾನೆ (ಉಪ ನಾಯಕ), ರೋಹಿತ್ ಶರ್ಮಾ, ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ ಕುಮಾರ್, ಜಸ್ಪ್ರಿತ್ ಬುಮ್ರಾ ಹಾಗೂ ಇಶಾಂತ್ ಶರ್ಮಾ ಸ್ಥಾನ ಪಡೆದಿದ್ದಾರೆ.
Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಬಾಬಾ ಬುಡನ್‍ ಗಿರಿ ಗೋರಿಗಳ ಮೇಲೆ ಸಂಘಪರಿವಾರದ ಯೋಜಿತ ದಾಳಿಗೆ ರಾಜ್ಯ ಸರಕಾರದ ವೈಫಲ್ಯವೇ ಕಾರಣ; ಪಾಪ್ಯುಲರ್ ಫ್ರಂಟ್

ಮುಂದಿನ ಸುದ್ದಿ »

ಪಾಕ್ ಹೇಳಿಕೆ ನೀಡಿದ ಮೌಲ್ವಿಯ ತಲೆ ಕಡಿದರೆ ಹತ್ತು ಲಕ್ಷ ರೂ. ಬಹುಮಾನ ಘೋಷಿಸಿದ ಬಿಜೆಪಿ ಮುಖಂಡ!

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×