ಅತ್ತ ‘ಇದು ದೋಸ್ತಿ ಸರ್ಕಾರವಲ್ಲ, ದುಷ್ಮನ್ ಸರ್ಕಾರ’ : ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ, ಇತ್ತ ಪಕ್ಷಾಂತರ ಮಾಡುವ ಶಾಸಕರನ್ನು ಜೈಲಿಗೆ ಹಾಕಬೇಕು : ವಾಟಾಳ್ ನಾಗರಾಜ್

0
240

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿರುವ ಮೈತ್ರಿ ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ. ಇದು ದೋಸ್ತಿ ಸರ್ಕಾರವಲ್ಲ, ದುಷ್ಮನ್ ಸರ್ಕಾರ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಹೋಗಲು ಸಾಧ್ಯವಿಲ್ಲ. ಬೇಕಿದ್ದರೆ ನಾವೇ ಸರ್ಕಾರ ರಚನೆ ಮಾಡುತ್ತೇವೆ. ಈ ಬಗ್ಗೆ ಈಗಾಗಲೇ ಯಡಿಯೂರಪ್ಪ ಅವರು ಹೇಳಿದ್ದಾರೆ. ಸರ್ಕಾರ ಏನ್ ಆಗುತ್ತದೆ ಎಂದು ಮಂಗಳವಾರದವರೆಗೆ ಕಾದು ನೋಡಬೇಕಿದೆ ಎಂದರು.

ಮೈತ್ರಿ ಸರ್ಕಾರ ಒಳಗೊಳಗೆ ಅಸಮಾಧಾನವಿದೆ. ಹೆಚ್. ವಿಶ್ವನಾಥ್ ಅವರಿಗೆ ಸಮ್ಮಿಶ್ರ ಸರ್ಕಾರದ ಬಗ್ಗೆ ಅಸಮಾಧಾನವಿತ್ತು. ಈ ಹಿಂದೆ ಅವರು ಹಳ್ಳಿ ಹಕ್ಕಿ ಎಂಬ ಪುಸ್ತಕ ಬರೆದಿದ್ದರು.

ಪಕ್ಷಾಂತರ ಮಾಡುವ ಶಾಸಕರನ್ನು ಜೈಲಿಗೆ ಹಾಕಬೇಕು : ವಾಟಾಳ್

ಪಕ್ಷಾಂತರ ಮಾಡುವ ಶಾಸಕರನ್ನು ಜೈಲಿಗೆ ಹಾಕಬೇಕು. ಅವರಿಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ನೀಡಬಾರದು. ಈ ರೀತಿಯ ಕಾನೂನು ಶೀಘ್ರವಾಗಿ ಜಾರಿಯಾಗಬೇಕೆಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅಭಿಪ್ರಾಯಪಟ್ಟಿದ್ದಾರೆ.

ಶಾಸಕರ ರೆಸಾರ್ಟ್ ವಾಸ್ತವ್ಯ ವಿರೋಧಿಸಿ ರಾಮನಗರದಲ್ಲಿ ಪ್ರತಿಭಟನೆ ನಡೆಸಿರುವ ವಾಟಾಳ್ ನಾಗರಾಜ್ ಮಾತನಾಡಿ, ರಾಜ್ಯದಲ್ಲಿ ಬರವಿದ್ದು, ಕುಡಿಯಲು ನೀರಿಲ್ಲ. ಜಾನುವಾರುಗಳಿಗೆ ಮೇವಿಲ್ಲ. ಆದರೆ ಶಾಸಕರು ಮಾತ್ರ ರೆಸಾರ್ಟ್ ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ. ಆದರೆ, ಈ ಬಗ್ಗೆ ಮೈತ್ರಿ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿಲ್ಲ. ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಮಾಡಬೇಕೆಂದು ವಾಟಾಳ್ ನಾಗರಾಜ್ ಅವರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here