ಸಂಸದ ಶ್ರೀರಾಮುಲು ಕಾರಿಗೆ ಕಲ್ಲೆಸೆದು ಆಕ್ರೋಶ ವ್ಯಕ್ತಪಡಿಸಿದ ತಿಪ್ಪೇಸ್ವಾಮಿ ಅಭಿಮಾನಿಗಳು!

0
556

ನ್ಯೂಸ್ ಕನ್ನಡ ವರದಿ-(13.04.18): ಮೊಳಕಾಲ್ಮೂರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಲು ಮುಂದಾಗಿದ್ದ ಸಂಸದ ಶ್ರೀರಾಮುಲು ಅವರಿಗೆ ಶಾಸಕ ತಿಪ್ಪೇಸ್ವಾಮಿ ಬೆಂಬಲಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಚಳ್ಳಕೆರೆಯ ನಾಯಕನ ಹಟ್ಟಿ ದೇಗುಲದ ಬಳಿ ಶ್ರೀರಾಮುಲು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದು ಕಾರಿನ ಗಾಜು ಪುಡಿ ಪುಡಿಯಾಗಿದೆ.

ಶ್ರೀರಾಮುಲು ಅವರು ಭಾರೀ ಭದ್ರತೆಯೊಂದಿಗೆ ತಿಪ್ಪೇರುದ್ರಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದ್ದಾರೆ. ಮೊಳಕಾಲ್ಮುರು ಕ್ಷೇತ್ರದಿಂದ ಟಿಕೆಟ್ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಸಂಸದ ಶ್ರೀರಾಮುಲು ತಿಪ್ಲೇರುದ್ರಸ್ವಾಮಿ ದೇಗುಲಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ತಿಪ್ಪೇಸ್ವಾಮಿ ಬೆಂಬಲಿಸುವ ಮಹಿಳೆಯರು ಈ ರೀತಿ ಪೊರಕೆ ಹಿಡಿದು ಪ್ರತಿಭಟನೆಗೆ ಮುಂದಾಗಿದ್ದಾರೆ.

ತಿಪ್ಪೇಸ್ವಾಮಿ ಬೆಂಬಲಗಿರು ಶ್ರೀರಾಮುಲು ಅವರ ಬೆಂಬಲಕ್ಕೆ ನಿಂತ ಬಿಜೆಪಿ ತಾಲೂಕು ಕಾರ್ಯದರ್ಶಿ ವೆಂಕಟ ಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ತಿಪ್ಪೇಸ್ವಾಮಿ ಬೆಂಬಲಿಗರು ಮತ್ತು ವೆಂಕಸ್ವಾಮಿ ಬೆಂಬಲಿತ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಸ್ಥಳದಲ್ಲಿ ನಿರ್ಮಾಣವಾಗಿದ್ದ ಉದ್ವಿಗ್ನ ಪರಿಸ್ಥಿತಿಯನ್ನು ಪೊಲೀಸರು ತಿಳಿಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here