ಆಗಸ್ಟ್ ಮೊದಲನೇ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್

0
31

ನ್ಯೂಸ್ ಕನ್ನಡ ವರದಿ: ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಸ್‌ಎಸ್‌ಎಲ್ ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯಾದ್ಯಂತ 220 ಕೇಂದ್ರಗಳಲ್ಲಿ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಮೌಲ್ಯಮಾಪನ ಮಾಡಲಾಗುತ್ತಿದೆ. ಸದ್ಯ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪೂರ್ಣಗೊಂಡಿದ್ದು, ಮುಂದಿನ ಎರಡು ದಿನಗಳಲ್ಲಿ 100 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿಯಲಿದೆ ಎಂದರು.

LEAVE A REPLY

Please enter your comment!
Please enter your name here