7ರಿಂದ 9ನೇ ತರಗತಿಯ ಪರೀಕ್ಷೆಗಳು ಮುಂದೂಡಿಕೆ: ಸಚಿವ ಸುರೇಶ್ ಕುಮಾರ್

0
1033

ನ್ಯೂಸ್ ಕನ್ನಡ ವರದಿ: ಕೊರೋನಾ ವೈರಾಣು ಸೋಂಕು ವ್ಯಾಪಕವಾಗಿ ತಡೆಗಟ್ಟುವುದಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು ಇದೀಗ 7ನೇ ತರಗತಿಯಿಂದ 9ನೇ ತರಗತಿಯವರೆಗಿನ ಪರೀಕ್ಷೆಯನ್ನು ಮುಂದೂಡಿದೆ.

ಒಂದು ವಾರ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳು, ಸಭೆ, ಸಮಾರಂಭಗಳು, ಮಾಲ್, ಥಿಯೇಟರ್ ಗಳಿಗೆ ಬಂದ್ ಮಾಡಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ 1ರಿಂದ 6ನೇ ತರಗತಿಯವರೆಗಿನ ವಾರ್ಷಿಕ ಪರೀಕ್ಷೆಯನ್ನು ರದ್ದುಗೊಳಿಸಿತ್ತು.

ಇದೀಗ 7ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 31ರವರೆಗೆ ಮುಂದೂಡಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here