ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಮುಂದುವರಿಯುತ್ತಾರೆ: ಸಂಶಯಗಳಿಗೆ ತೆರೆ ಎಳೆದ ಸುರ್ಜೇವಾಲಾ!

0
217

ನ್ಯೂಸ್ ಕನ್ನಡ ವರದಿ : ಲೋಕಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿಗೆ ಹೊಣೆಹೊತ್ತು ರಾಹುಲ್ ಗಾಂಧಿ ಕಳೆದ ತಿಂಗಳೇ ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ ಹಿಂದುಳಿದ ಅಥವಾ ದಲಿತ ಸಮಾಜದ ವ್ಯಕ್ತಿಯನ್ನು ಈ ಸ್ಥಾನಕ್ಕೆ ನೇಮಿಸುವಂತೆಯೂ ಸೂಚನೆ ನೀಡಿದ್ದರು. ಆದರೆ, ಅವರ ರಾಜೀನಾಮೆಯನ್ನು ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ತಿರಸ್ಕರಿಸಲಾಗಿತ್ತು. ಕಾಂಗ್ರೆಸ್ ಕಾರ್ಯಕಾರಿ ಸಭೆ ಹಾಗೂ ಕೋರ್ ಕಮಿಟಿ ಸಭೆ ಎರಡರಲ್ಲೂ ರಾಹುಲ್ ಗಾಂಧಿ ಅವರ ರಾಜೀನಾಮೆಯನ್ನು ಸಾರಾಸಗಟಾಗಿ ತಳ್ಳಿಹಾಕಲಾಗಿದೆ.

ಅಲ್ಲದೆ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ ನೇತೃತ್ವದಲ್ಲಿ ರಾಹುಲ್ ಗಾಂಧಿಯ ಮನವೋಲೈಸಲು ಎಲ್ಲಾ ನಾಯಕರು ಒಮ್ಮತದ ಒಪ್ಪಿಗೆ ಸೂಚಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಭವಿಷ್ಯದ ರೂಪುರೇಶೆಗಳು ಹಾಗೂ ಅಧ್ಯಕ್ಷರ ಆಯ್ಕೆ ಕುರಿತು ಚರ್ಚೆ ನಡೆಸಲು ಬುಧವಾರ ನವ ದೆಹಲಿಯಲ್ಲಿ ಪಕ್ಷದ ಕೋರ್​ ಕಮಿಟಿ ಸಭೆ ಆಯೋಜಿಸಲಾಗಿತ್ತು. ಎಂದು ರಣ್ದೀಪ್​ ಸುರ್ಜೆವಾಲಾ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಭವಿಷ್ಯದ ರೂಪುರೇಶೆಗಳು ಹಾಗೂ ಅಧ್ಯಕ್ಷರ ಆಯ್ಕೆ ಕುರಿತು ಚರ್ಚೆ ನಡೆಸಲು ಬುಧವಾರ ನವ ದೆಹಲಿಯಲ್ಲಿ ಪಕ್ಷದ ಕೋರ್​ ಕಮಿಟಿ ಸಭೆ ಆಯೋಜಿಸಲಾಗಿತ್ತು. ಕಳೆದ ಎರಡು ದಶಕದ ಅವಧಿಯಲ್ಲಿ ಗಾಂಧಿ ಕುಟುಂಬದ ವ್ಯಕ್ತಿಗಳಿಲ್ಲದೆ ನಡೆದ ಮೊದಲ ಕಾಂಗ್ರೆಸ್ ನಾಯಕರ ಸಭೆ ಇದಾಗಿದೆ. ಈ ಸಭೆಯಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಅಹಮದ್​ ಪಟೇಲ್, ಗುಲಾಂ ನಭಿ ಆಜಾದ್, ಪಿ. ಚಿದಂಬರ್​, ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್, ಆನಂದ್ ಶರ್ಮಾ ಹಾಗೂ ರಣ್ದೀಪ್​ ಸುರ್ಜೆವಾಲಾ ಸೇರಿದಂತೆ ಅನೇಕ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here