ಬೆಳ್ತಂಗಡಿ: ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ ಪೊಲೀಸ್ ಪೇದೆ ಅಮಾನತು!

0
212

ನ್ಯೂಸ್ ಕನ್ನಡ ವರದಿ: (12.06.19): ಬೆಳ್ತಂಗಡಿಯ ಖಾಸಗಿ ಕಾಲೇಜೊಂದರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗೆ ಸೇರಿದ ಕೆಲವು ವಿದ್ಯಾರ್ಥಿಗಳು ಗೂಂಡಾ ವರ್ತನೆ ತೋರಿ ಇನ್ನೊಂದು ಕೋಮಿನ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದರು. ಈ ಕೃತ್ಯವನ್ನು ಪ್ರತಿಭಟಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯು ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ವಿದ್ಯಾರ್ಥಿಗಳು ಉಪವಾಸಿಗರು ಎಂಬ ಪರಿಗಣನೆಯನ್ನೂ ನೀಡದೇ ಪೊಲೀಸ್ ಪೇದೆ ಆನಂದ್ ಎಂಬಾತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಖಾಸಗಿ ಸುದ್ದಿಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾ ಎಸ್ಪಿ ಬಿ.ಎಂ. ಲಕ್ಷ್ಮೀಕಾಂತ್, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತವಾದ ತನಿಖೆಯನ್ನು ನಡೆಸಲಾಗುವುದು. ಈಗಾಗಲೇ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಪೊಲೀಸ್ ಪೇದೆ ಆನಂದ ಎಂಬವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಹಲ್ಲೆ ಪ್ರಕರಣವು ರಾಜ್ಯಾದ್ಯಂತ ವ್ಯಾಪಕ ಖಂಡನೆಗೆ ಒಳಗಾಗಿತ್ತು.

LEAVE A REPLY

Please enter your comment!
Please enter your name here