ಭಾರತದಲ್ಲಿ ಕೊನೆಗೂ ಟಿಕ್-ಟಾಕ್ ಬ್ಯಾನ್? ಗೂಗಲ್ ಹಾಗೂ ಆ್ಯಪಲ್ ಕಂಪನಿಗಳಿಗೆ ಕೇಂದ್ರ ಸರಕಾರ ನೀಡಿದ ಸೂಚನೆಯೇನು?

0
171

ನ್ಯೂಸ್ ಕನ್ನಡ ವರದಿ (17-4-2019): ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಬಳಿಕ ಮದ್ರಾಸ್ ಹೈ ಕೋರ್ಟ್ ಜನಪ್ರಿಯ ವಿಡಿಯೋ ಶೇರಿಂಗ್ ಅಪ್ಲಿಕೇಶನ್ ಚೀನಾ ಮೂಲದ ಟಿಕ್ ಟಾಕ್ ಅನ್ನು ತೆಗೆದು ಹಾಕುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಕಂಪನಿ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಲು ನಿರಾಕರಿಸಿತ್ತು. ಈಗ ಆಪ್‍ ಪ್ಲೇ ಸ್ಟೋರ್ ನಿಂದ ತೆಗೆದು ಹಾಕಿ ಎಂದು ಗೂಗಲ್ ಮತ್ತು ಆಪಲ್ ಕಂಪನಿಗಳಿಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೂಚನೆ ನೀಡಿದೆ.

ಈ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾ. ರಂಜನ್ ಗೊಗೋಯ್ ಮತ್ತು ನ್ಯಾ. ಸಂಜೀವ್ ಖನ್ನಾ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶಕ್ಕೆ ತಡೆ ನೀಡುವುದಿಲ್ಲ ಎಂದು ಹೇಳಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿತು.ಸುಪ್ರೀಂ ಕೋರ್ಟ್ ಮದ್ರಾಸ್ ಹೈ ಕೋರ್ಟ್ ಆದೇಶಕ್ಕೆ ತಡೆ ನೀಡದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಆ್ಯಪನ್ನು ಕಿತ್ತು ಹಾಕುವಂತೆ ಆಪಲ್ ಮತ್ತು ಗೂಗಲ್ ಕಂಪನಿಗಳಿಗೆ ಸೂಚಿಸಿದೆ. ಕೇಂದ್ರದ ಸೂಚನೆಯ ಹಿನ್ನೆಲೆಯಲ್ಲಿ ಗೂಗಲ್ ಮತ್ತು ಆಪಲ್ ಕಂಪನಿ ಆ್ಯಪ್ ಸ್ಟೋರ್ ನಿಂದ ಟಿಕ್ ಟಾಕ್ ಕಿತ್ತು ಹಾಕಿದೆ.

LEAVE A REPLY

Please enter your comment!
Please enter your name here