Saturday October 21 2017

Follow on us:

Contact Us
    353

ಲಿಂಗಾಯತ ಹೋರಾಟದಿಂದ ಆರೆಸ್ಸೆಸ್ ನಾಯಕರು ಕಂಗಾಲಾಗಿದ್ದಾರೆ: ಜಮಾದಾರ್

ನ್ಯೂಸ್ ಕನ್ನಡ-(21.10.17): ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟವು ಸದ್ಯ ತೀವ್ರಗೊಂಡಿದೆ. ಈ ಕುರಿತು ಮಾತನಾಡಿದ ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ ಜಾಮದಾರ, ಲಿಂಗಾಯತರು ಯಾವತ್ತೂ ಹಿಂದೂ ಧರ್ಮದ ಭಾಗವಲ್ಲ. ಆದರೂ ನೀವೇಕೆ ಹಿಂದೂ ಧರ್ಮವನ್ನು ಬಿಟ್ಟು ಬೇರೆಯಾಗಬೇಡಿ ಎಂದು ನಮ್ಮನ್ನು ಪದೇಪದೇ ಒತ್ತಾಯಿಸುತ್ತಿದ್ದೀರಿ ಎಂದು ಪೇಜಾವರ ಶ್ರೀಗಳನ್ನು ಪ್ರಶ್ನಿಸಿದ್ದಾರೆ.

ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ‘ಲಿಂಗಾಯತರ ಹೋರಾಟದಿಂದ ಪೇಜಾವರ ಶ್ರೀಗಳು, ಬಿಜೆಪಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ನಾಯಕರು ಕಂಗಾಲಾಗಿದ್ದಾರೆ. ಲಿಂಗಾಯತರೇನು ಭಯೋತ್ಪಾದಕರೇ, ದೇಶದ್ರೋಹಿಗಳೇ, ರಾಷ್ಟ್ರ ಭಕ್ತಿಗೆ ಭಂಗ ತರುವವರೇ, ಅವರಿಂದ ದೇಶಕ್ಕೆ ಯಾವ ಹಾನಿಯಾಗಿದೆ’ ಎಂದು ಪ್ರಶ್ನಿಸಿದ ಜಾಮದಾರ, ‘ಶ್ರೀಗಳು ಅವರ ಹೇಳಿಕೆ ಹಿಂದಿರುವ ನಿಗೂಢ ರಹಸ್ಯ ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು.

ಲಿಂಗಾಯತ ಧರ್ಮದ ಹೋರಾಟ ತೀವ್ರಗೊಂಡರೆ ರಕ್ತಪಾತ ಆಗಲಿದೆ ಎಂದು ಸಂಘ ಪರಿವಾರದವರು ಹೇಳಿದ್ದಾರೆ. ಈಗಾಗಲೇ ಸಿದ್ಧಾಂತಕ್ಕೆ ಹೋರಾಟ ಮಾಡಿದ ಮೂವರು ಲಿಂಗಾಯತರು ಬಲಿಯಾಗಿದ್ದಾರೆ. ನನಗೂ ಕೂಡಾ ಜೀವ ಭಯ ಇದೆ. ಆದರೆ, ನಾನು ಇದಕ್ಕೆ ಅಂಜುವುದಿಲ್ಲ. ಶರಣರಿಗೆ ಮರಣವೇ ಮಹಾನವವಿ’ ಎಂದು ಜಾಮದಾರ ಹೇಳಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ನನ್ನನ್ನು ಯಾಕೆ ಸ್ವರ್ಗಕ್ಕೆ ಕರೆದೊಯ್ಯಲಿಲ್ಲ?

ಮುಂದಿನ ಸುದ್ದಿ »

ಬಿಜೆಪಿಯ ವಿರೋಧ: ಕೊನೆಗೂ ಮೆರ್ಸಲ್ ಚಿತ್ರದ ಜಿಎಸ್ಟಿ ದೃಶ್ಯಕ್ಕೆ ಕತ್ತರಿ!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×