Tuesday December 6 2016

Follow on us:

Contact Us
nnjhji
  1011

ಕಿಡಿಗೇಡಿಗಳ ಕೃತ್ಯ; ಬಸ್ ಮೇಲೆ ಕಲ್ಲು ತೂರಾಟ

ನ್ಯೂಸ್ ಕನ್ನಡ ವರದಿ(6.12.2016)ಕಾಸರಗೋಡು: ಬಸ್ ಗಳ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ ಘಟನೆ ಉಪ್ಪಳ ಪರಿಸರದಲ್ಲಿ ನಡೆದಿದ್ದು , ಘಟನೆ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ಪತ್ತೆಗೆ ಮಂಜೇಶ್ವರ ಪೊಲೀಸರು ಬಲೆ ಬೀಸಿದ್ದಾರೆ.

ಅಯೋಧ್ಯಾ ಘಟನೆಯ ವರ್ಷಾಚರಣೆ ಹಿನ್ನೆಲೆಯಲ್ಲಿ ಕೆಲ ಕಿಡಿಗೇಡಿಗಳು ಕೃತ್ಯ ನಡೆಸಿರಬಹುದು ಎಂಬ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಉಪ್ಪಳದಿಂದ ಬಾಯಾರು ಕಡೆಗೆ ತೆರಳುತ್ತಿದ್ದ ಖಾಸಗಿ ಮತ್ತು ಉಪ್ಪಳದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನ ಮೇಲೆ ಉಪ್ಪಳ ಸಮೀಪದ ಪೈವಳಿಕೆ ಮತ್ತು ಸೋಂಕಾಲ್ ಎಂಬಲ್ಲಿ ಬೈಕ್ ನಲ್ಲಿ ಮುಸುಕುಧಾರಿಗಳಾಗಿ ಬಂದ ತಂಡವು ಕಲ್ಲೆಸೆದು ಪರಾರಿಯಾಗಿದೆ ಎನ್ನಲಾಗಿದೆ.

ಕಲ್ಲೆಸೆತದಿಂದ ಬಸ್ ನ ಗಾಜುಗಳಿಗೆ ಹಾನಿಯಾಗಿದೆ.  ಪ್ರಯಾಣಿಕರು ಮತ್ತು ಬಸ್ಸು ಸಿಬಂದಿಗಳಿಗೆ ಯಾವುದೇ ಅಪಾಯ ಉಂಟಾಗಿಲ್ಲ. ಬಸ್ ಗಳ ಮೇಲೆ ನಡೆದ ಕಲ್ಲೆಸೆತ ಘಟನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಮಂಜೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

nkskkasv

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ತಮಿಳುನಾಡು ಸಿಎಂ ಆಗಿ ಪನ್ನೀರ್ ಸೆಲ್ವಂ ಪ್ರಮಾಣ ವಚನ ಸ್ವೀಕಾರ

ಮುಂದಿನ ಸುದ್ದಿ »

ಶಾಲಾ ಪರಿಸರದಲ್ಲಿ ಮಾದಕ ದ್ರವ್ಯ ಮಾರಾಟ; ನೈಜೀರಿಯಾ ಪ್ರಜೆ ಬಂಧನ

ಸಿನೆಮಾ

 • kattappa

  ಕಟ್ಟಪ್ಪ ಬಾಹುಬಲಿಯನ್ನು ಕೊಂದಿದ್ದು ಕರ್ನಾಟಕದಲ್ಲಿ!

  March 18, 2017

  ನ್ಯೂಸ್ ಕನ್ನಡ ವರದಿ(18.03.2017)-ಬೆಂಗಳೂರು: ಬಾಹುಬಲಿ-2 ಚಿತ್ರಕ್ಕೆ ಕರ್ನಾಟಕದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರವನ್ನು ನಿಷೇಧ ಮಾಡುವಂತೆ ಭಾರೀ ಒತ್ತಾಯಗಳು ಕೇಳಿ ಬಂದಿದೆ. ತಮಿಳು ನಟ ಸತ್ಯರಾಜ್ ಕಾವೇರಿ ಹೋರಾಟದ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಕನ್ನಡಿಗರ ...

  Read More
 • eega

  ಕಿಚ್ಚ ಸುದೀಪ್ ಗೆ ಆಂಧ್ರ ಸರಕಾರದ ನಂದಿ ಪ್ರಶಸ್ತಿ

  March 1, 2017

  ನ್ಯೂಸ್ ಕನ್ನಡ(1-3-2017): 2012-13ನೆ ಸಾಲಿನ “ನಂದಿ ಪ್ರಶಸ್ತಿ”ಯನ್ನು ಆಂಧ್ರಪ್ರದೇಶ ಸರಕಾರ ಘೋಷಿಸಿದ್ದು, “ಅಭಿನಯ ಚಕ್ರವರ್ತಿ” ಕಿಚ್ಚ ಸುದೀಪ್ ಅತ್ಯುತ್ತಮ ಖಳನಟನಾಗಿ ಆಯ್ಕೆಯಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ, ಎಸ್.ಎಸ್. ರಾಜಮೌಳಿ ನಿರ್ದೇಶನದ “ಈಗ” ಚಿತ್ರದ ನಟನೆಗಾಗಿ ಸುದೀಪ್ ಅವರಿಗೆ “ನಂದಿ ...

  Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×