Thursday August 18 2016

Follow on us:

Contact Us
    37369

ಗೋ ಸಾಗಾಟ ಮಾಡುತ್ತಿದ್ದಾತನ ಹತ್ಯೆ; ಕರಾವಳಿಯಲ್ಲಿ ಅಟ್ಟಹಾಸ ಮೆರೆದ ಗೋರಕ್ಷಕರು

ನ್ಯೂಸ್ ಕನ್ನ ಡ ವರದಿ-ಉಡುಪಿ: ಜಾನುವಾರು ದಲ್ಲಾಳಿ ಮೇಲೆ ದನ ಸಾಗಾಟ ಮಾಡುವಾಗ ಭೀಕರ ಹಲ್ಲೆ ನಡೆಸಿ ಹಿಂದೂ ಸಂಘಟನೆ ಕಾರ್ಯಕರ್ತರು ಹತ್ಯೆ ಮಾಡಿದ ಘಟನೆ ಬ್ರಹ್ಮಾವರ ಸಮೀಪದ ಕೊಕ್ಕರ್ಣೆಯಲ್ಲಿ ನಡೆದಿದೆ.

ಪ್ರವೀಣ್ ಪೂಜಾರಿ(29) ಮೃತ ವ್ಯಕ್ತಿ. ಈತ ಇಬ್ಬರ ಜೊತೆಗೂಡಿ ರಾತ್ರಿ 7.30 ರಿಂದ 8 ಗಂಟೆ ವೇಳೆ ವಾಹನಕ್ಕೆ ದನಗಳನ್ನು ತುಂಬಿಸುತ್ತಿದ್ದ. ಈ ವೇಳೆ ಸ್ಥಳೀಯ ಗೋರಕ್ಷಕರ ತಂಡ ಮೂವರ ಮೇಲೆ ದಾಳಿ ನಡೆಸಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ ಆರೋಪಿಗಳು, ನಾವು ಗೋವು ಸಾಗಾಟವನ್ನು ಪತ್ತೆ ಹಚ್ಚಿದ್ದೇವೆ ಎಂದು ಹೇಳಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಪ್ರವೀಣ್ ಪೂಜಾರಿ ಮೃತಪಟ್ಟಿದ್ದಾನೆ.

ಘಟನೆಯಲ್ಲಿ ಅಕ್ಷಯ್ ಎಂಬಾತನಿಗೆ ಗಾಯವಾಗಿದ್ದು, ಘಟನೆಗೆ ಸಂಬಂಧಿಸಿದಂತೆ 15 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇವರ ಮೇಲೆ ಕೊಲೆ ಪ್ರಕರಣ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಎಸ್ ಪಿ ಬಾಲಕೃಷ್ಣ, ಹಾಗೂ ಶಾಸಕ ವಿನಯ ಕುಮಾರ್ ಸೊರಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

nkasv

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಶಾಸಕ ಸಿ.ಟಿ.ರವಿ ಎದುರಲ್ಲೇ ಆತ್ಮಹತ್ಯೆಗೆ ಯತ್ನ

ಮುಂದಿನ ಸುದ್ದಿ »

ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಗೆ ಸಮ್ಮತಿ

ಸಿನೆಮಾ

  • ಜುಲೈ 3ರಂದು ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಫಿಕ್ಸ್

    June 28, 2017

    ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ರಕ್ಷಿತ್‌ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಜುಲೈ 3ರಂದು ನಡೆಯಲಿದೆ. ಇತ್ತೀಚೆಗೆ ತೆರೆಕಂಡ ಕಿರಿಕ್‌ ಪಾರ್ಟಿ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಟಿಸಿದ್ದರು. ಈ ಚಿತ್ರದಲ್ಲಿ ಕರ್ಣ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×