Saturday November 28 2015

Follow on us:

Contact Us
5
  221

ಉಡುಪಿ: ಕನಕ ಸದ್ಭಾವನಾ ಜ್ಯೋತಿ ರಥಯಾತ್ರೆ ಸಮಾರೋಪ: ಉಡುಪಿ ರಥಬೀದಿಯಲ್ಲಿ ಕನಕ ದೇವಳ ನಿರ್ಮಾಣ

ನ್ಯೂಸ್ ಕನ್ನಡ ವರದಿ-ಉಡುಪಿ: ಬೆಂಗಳೂರಿನ ಕನಕ ಸದ್ಭಾವನ ಜ್ಯೋತಿ ರಥಯಾತ್ರೆ ಸಮಿತಿ ವತಿಯಿಂದ ಭಕ್ತ ಕನಕದಾಸರ 528ನೆ ಜಯಂತಿ ಆಚರಣೆ ಪ್ರಯುಕ್ತ ಕನಕದಾಸರ ಹುಟ್ಟೂರು ಬಾಡ ಗ್ರಾಮದಿಂದ ಹೊರಟ ಕನಕ ಸದ್ಭಾವನಾ ಜ್ಯೋತಿ ರಥಯಾತ್ರೆಯು ಶನಿವಾರ ಉಡುಪಿಗೆ ಆಗಮಿಸಿತು.

ಬೆಳ್ಳಿಯ ರಥ, ಜ್ಯೋತಿ ಹಾಗೂ ಕನಕದಾಸರ ಮೂರ್ತಿಯೊಂದಿಗೆ ಉಡುಪಿ ನಗರದ ಜೋಡುಕಟ್ಟೆಯಿಂದ ಹೊರಟ ಮೆರವಣಿಗೆಗೆ ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಚಾಲನೆ ನೀಡಿದರು. ಅಲ್ಲಿಂದ ನಗರದ ಪ್ರಮುಖ ಬೀದಿಯಲ್ಲಿ ಸಾಗಿ ಬಂದ ಭವ್ಯ ಮೆರವಣಿಗೆಯು ರಥಬೀದಿ ತಲುಪಿತು. ಬಳಿಕ ಕನಕದಾಸರ ಮೂರ್ತಿಗೆ ಪರ್ಯಾಯ ಕಾಣಿಯೂರು ಮಠಾಧೀಶ ಶ್ರೀವಿದ್ಯಾ ವಲ್ಲಭ ತೀರ್ಥ ಸ್ವಾಮೀಜಿ ವಿಶೇಷ ಪೂಜೆ ಸಲ್ಲಿಸಿದರು.

ಮಠದ ರಾಜಾಂಗಣದಲ್ಲಿ ಜರಗಿದ ಬಹಿರಂಗ ಸಭೆಯಲ್ಲಿ ಪರ್ಯಾಯ ಕಾಣಿಯೂರು ಮಠಾಧೀಶ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ರಥಬೀದಿಯಲ್ಲಿರುವ ಕನಕನ ಮೂರ್ತಿಯನ್ನು ಜೀರ್ಣೋದ್ಧಾರ ಮಾಡಿ ದೇವಸ್ಥಾನ ನಿರ್ಮಿಸಲು ಬೇಕಾದ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದು ಹೇಳಿದರು.

ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಮಾತನಾಡಿ, ಕನಕನಿಗೆ ದೇವಸ್ಥಾನ ನಿರ್ಮಿಸುವ ಮೂಲಕ ಉಡುಪಿಯಲ್ಲಿ ಕನಕದಾಸರಿಗೆ ಸಿಗಬೇಕಾದ ಎಲ್ಲ ರೀತಿಯ ಸ್ಥಾನಮಾನ ದೊರಕಿಸಿಕೊಡಲಾಗುವುದು. ಈ ದೇವಸ್ಥಾನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರಲ್ಲಿ ಉದ್ಘಾಟಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ರಾಮವಳ್ಳಿ ರಾಮಕೃಷ್ಣ ಯೋಗಾಶ್ರಮದ ಅಧ್ಯಕ್ಷ ಶ್ರೀಸ್ವಾಮಿ ಯೋಗೇಶ್ವ ರಾನಂದ, ರೇವಣಸಿದ್ದೇಶ್ವರ ಮಠದ ಉಮೇಶ್ ಸ್ವಾಮೀಜಿ, ಸಮಿತಿಯ ರಾಜ್ಯಾಧ್ಯಕ್ಷ ಓಂ.ಶ್ರೀ.ಕೃಷ್ಣಮೂರ್ತಿ, ಪಿ.ಯುವರಾಜ್, ಡಿ.ವೆಂಕಟೇಶ್ ಮೂರ್ತಿ, ಪ್ರಭಾವತಿ, ದೇವರಾಜ್, ಮಹೇಶ್, ಅಮೃತೇಶ್ ಮೊದಲಾದ ವರು ಉಪಸ್ಥಿತರಿದ್ದರು.

4

3

2

1

6

nknpugkp

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಉಡುಪಿ: ನಿವೃತ್ತ ಪ್ರೊವೈಸ್ ಚಾನ್ಸೆಲರ್ ಪ್ರೊ.ವರದರಾಯ ಭಂಡಾರಿ ನಿಧನ

ಮುಂದಿನ ಸುದ್ದಿ »

ಉಡುಪಿ: ಕನಕ ಚಿಂತನೆಯಿಂದ ಸಹಿಷ್ಣುತೆ: ಸಿಇಒ

ಸಿನೆಮಾ

 • 3

  ನನಗೂ ತುಳು ಸಿನಿಮಾದಲ್ಲಿ ನಟಿಸುವ ಆಸೆ: ಶಿವರಾಜ್ ಕುಮಾರ್

  January 19, 2017

  – ಶಫೀ ಉಚ್ಚಿಲ ನ್ಯೂಸ್ ಕನ್ನಡ ವರದಿ (19-1-17): ಕಾಪು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಟಗರು ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ‘ಟಗರು’ ತಂಡ ಎರಡನೇ ಹಂತವನ್ನು ಕಾಪು ಸಮೀಪದ ಉಚ್ಚಿಲದಲ್ಲಿ ಚಿತ್ರೀಕರಿಸುತ್ತಿದ್ದು, ...

  Read More
 • Chennai-Express-First-Look-tbwm

  ಚೆನ್ನೈ ಎಕ್ಸ್ ಪ್ರೆಸ್ ನಿರ್ಮಾಪಕನ ವಿರುದ್ಧ ಅತ್ಯಾಚಾರ ಆರೋಪ

  January 18, 2017

  ನ್ಯೂಸ್ ಕನ್ನಡ(18-1-2017): ಸೂಪರ್ ಹಿಟ್ ಬಾಲಿವುಡ್ ಚಲನಚಿತ್ರ “ಚೆನ್ನೈ ಎಕ್ಸ್ ಪ್ರೆಸ್”ನ ನಿರ್ಮಾಪಕ ಕರೀಂ ಮೊರಾನಿ ವಿರುದ್ಧ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 25 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿರುವುದಾಗಿ ದೂರು ದಾಖಲಾಗಿದ್ದು, ...

  Read More
 • ra-one

  “ರಾ ಒನ್” ಚಿತ್ರದ ರಾಷ್ಟ್ರಪ್ರಶಸ್ತಿ ವಿಜೇತ ಅನಿಮೇಟರ್ ನಿಧನ

  January 18, 2017

  ನ್ಯೂಸ್ ಕನ್ನಡ(18-1-2017): ರಾ ಒನ್ ಚಿತ್ರದ ಅನಿಮೇಷನ್ ಗಾಗಿ ರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದ ಚಾರು ಖಂದಾಲ್ ನಿಧನರಾಗಿದ್ದಾರೆ. 4 ವರ್ಷಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾರು ದೀರ್ಘಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಶಾರುಕ್ ...

  Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×