ಆಸೀಫಾ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆ ಇದೆ: ವಿಶ್ವಸಂಸ್ಥೆ

0
1034

ನ್ಯೂಸ್ ಕನ್ನಡ ವರದಿ-(14.04.18): ಜಮ್ಮುವಿನಲ್ಲಿ ಕ್ರೂರ ಮತ್ತು ಅಮಾನವೀಯ ಘಟನೆ ನಡೆದಿದ್ದು, ಕುದುರೆ ಮೇಯಿಸಲೆಂದು ಹೊರಟ ಆಸೀಫಾ ಎಂಬ ಬಾಲಕಿಯನ್ನು ಸ್ಥಳೀಯ ದೇವಸ್ಥಾನವೊಂದರಲ್ಲಿ ಕೂಡಿ ಹಾಕಿ ಮಾದಕ ದ್ರವ್ಯ ನೀಡಿ ನಿರಂತರ ಮೂರು ದಿನಗಳ ಕಾಲ ಅತ್ಯಾಚಾರ ಮಾಡಲಾಗಿತ್ತು. ಬಳಿಕ ಬಾಲಕಿಯನ್ನು ಕೊಂದು ಕಾಡಿನಲ್ಲಿ ಎಸೆದಿದ್ದರು. ಇದೀಗ ಈ ಕುರಿತಾದಂತೆ ವಿಶ್ವಸಂಸ್ಥೆಯು ಧ್ವನಿಯೆತ್ತುದ್ದು, ಆಸೀಫಾ ಅತ್ಯಾಚಾರ ಪ್ರಕರಣದಲ್ಲಿ ಸಂಪೂರ್ಣ ನ್ಯಾಯ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.

ಈ ಕುರಿತು ಮಾತನಾಡಿದ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಾಸ್, “ಭಾರತದಲ್ಲಿ 8 ವರ್ಷದ ಬಾಲಕಿಯೋರ್ವಳ ಮೇಲೆ ನಡೆದ ಪೈಶಾಚಿಕ ಕೃತ್ಯದ ಕುರಿತಾದಂತೆ ಮಾಧ್ಯಮಗಳ ಮೂಲಕ ನಮಗೆ ವಿವರ ಲಭಿಸಿದೆ. ಈ ಪ್ರಕರಣದಲ್ಲಿ ಭಾಗಿಯಾದ ದುಷ್ಕರ್ಮಿಗಳಿಗೆ ಶಿಕ್ಷೆ ನೀಡುವ ಮೂಲಕ ಬಾಲಕಿಗೆ ನ್ಯಾಯ ಸಿಗುತ್ತದೆ ಎನ್ನುವಂತಹ ಸಂಪೂರ್ಣ ಭರವಸೆ ನಮಗೆ ಇದೆ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಾಸ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here