Monday December 4 2017

Follow on us:

Contact Us

ದತ್ತಪೀಠದಲ್ಲಿ ಪೆಟ್ರೋಲ್ ಬಾಂಬ್: 13 ಮಂದಿ ಪೊಲೀಸ್ ವಶಕ್ಕೆ!

ನ್ಯೂಸ್ ಕನ್ನಡ ವರದಿ-(04.12.17): ದತ್ತಪೀಠ ಬಾಬಾಬುಡನ್ ಗಿರಿಯಲ್ಲಿ ದತ್ತಮಾಲಾಧಾರಿಗಳು ತಮ್ಮ ವೃತದ ಕೊನೆಯ ದಿನದಂದು ನಿಷೇಧಿತ ಸ್ಥಳಕ್ಕೆ ಪ್ರವೇಶಿಸಿ ಅಲ್ಲಿದ್ದ ಗೋರಿಗಳಿಗೆ ಹಾನಿ ಮಾಡಿ ಭಗವಾಧ್ವಜವನ್ನು ನೆಟ್ಟಿದ್ದರು. ಈ ಘಟನೆಯಲ್ಲಿ ಇಬ್ಬರು ಪೊಲೀಸರು ಕೂಡಾ ಗಾಯಗೊಂಡಿದ್ದರು. ಆದರೆ ಬಾಬಾ ಬುಡನ್ ಗಿರಿಯಲ್ಲಿ ನಡೆಯಲಿದ್ದ ಬಹುದೊಡ್ಡ ಅನಾಹುತವೊಂದನ್ನು ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ನೇತೃತ್ವದ ತಂಡವು ತಪ್ಪಿಸಿದೆ. ಸಾರಾಯಿ ಬಾಟಲಿಗಳಲ್ಲಿ ಪೆಟ್ರೋಲ್ ಬಾಂಬ್ ತಯಾರಿಸಿ ಗಲಭೆಗೆ ಕಿಡಿ ಹಚ್ಚಲು ಪಿತೂರಿ ಹೂಡಿದ್ದ 13 ಮಂದಿಯನ್ನು ಅಣ್ನಾಮಲೈ ನೇತೃತ್ವದ ತಂಡವು ಬಂಧಿಸಿದೆ ಎಂದು ತಿಳಿದು ಬಂದಿದೆ.

ಸಾರಾಯಿ ಬಾಟಲ್ ನಲ್ಲಿ ಪೆಟ್ರೋಲ್ ಹಾಗೂ ಬಟ್ಟೆ ಸುತ್ತಿ ತಯಾರಿಸಿದ್ದ ಐದು ಪೆಟ್ರೋಲ್ ಬಾಂಬ್‌ಗಳನ್ನು ಪೊಲೀಸರು ವಶಪಡಿಸಿದ್ದಾರೆ. ತಮಿಳು ಕಾಲೊನಿಯಲ್ಲಿ 15 ರಿಂದ 18 ವಯಸ್ಸಿನ ಹುಡುಗರು ಈ ಕೃತ್ಯ ಎಸಗಿದ್ದಾರೆ. ರಷ್ಯಾ ದೇಶದಲ್ಲಿ ಬಳಸುವ ಮಾದರಿಯಲ್ಲಿರುವ ಈ ಪೆಟ್ರೋಲ್ ಬಾಂಬ್ ತಯಾರಾಗಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ ಹೆಚ್ಚಾಗಿ ಇದನ್ನು ಬಳಸುತ್ತಾರೆ ಎಂದು ಅವರು ತಿಳಿಸಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ನಾನು ಸತ್ಯದ ಪರ, ಸರ್ವರ ಹಿತ ನನಗೆ ಮುಖ್ಯ: ಎಸ್ಪಿ ರವಿ ಚನ್ನಣ್ಣನವರ್

ಮುಂದಿನ ಸುದ್ದಿ »

ಮುಂಬೈ: ಖ್ಯಾತ ಬಾಲಿವುಡ್ ನಟ ಶಶಿ ಕಪೂರ್ ನಿಧನ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×