Tuesday December 5 2017

Follow on us:

Contact Us

ಬಾಬರಿ ಮಸ್ಜಿದ್ ವಿವಾದ: ಫೆಬ್ರವರಿ 8ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ!

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿದೆ. ಮುಖ್ಯ ನ್ಯಾಯಧೀಶ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಅಶೋಕ್ ಭೂಷಣ್, ಎಸ್ ಅಬ್ದುಲ್ ನಾಜಿರ್ ಒಳಗೊಂಡ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಈ ನಿರ್ಣಯ ತೆಗೆದುಕೊಂಡಿದೆ.

ಅಯೋಧ್ಯೆಯಲ್ಲಿರುವ ವಿವಾದಿತ 2.77 ಎಕರೆ ಪ್ರದೇಶವನ್ನು ಮೂವರು ಪಾರ್ಟಿಗಳಾದ ಸುನ್ನಿ ವಕ್ಫ್ ಬೋರ್ಡ್‌, ನಿರ್ಮೋಹಿ ಅಖಾರ ಮತ್ತು ರಾಮ್‌ ಲಲ್ಲಾ ನಡುವೆ ಸಮಾನವಾಗಿ ಹಂಚಿಕೆ ಮಾಡಲು ಅಲಹಾಬಾದ್‌ ಹೈಕೋರ್ಟ್‌ ತೀರ್ಪು ನೀಡಿತ್ತು.

ಪ್ರಮುಖ ವಕೀಲರಾದ ಕೆ ಪರಸರಣ್‌, ಸಿ ಎಸ್‌ ವೈದ್ಯನಾಥನ್‌ ಮತ್ತು ಸೌರಭ್‌ ಶಂಶೇರಿ ಅವರು ರಾಮ್‌ ಲಲ್ಲಾ ಪರವಾಗಿ ವಾದ ಮಂಡನೆ ಮಾಡಲಿದ್ದಾರೆ. ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಉತ್ತರ ಪ್ರದೇಶ ಸರಕಾರವನ್ನು ಪ್ರತಿನಿಧಿಸಲಿದ್ದಾರೆ. ಹಿರಿಯ ವಕೀಲರಾದ ಕಪಿಲ್‌ ಸಿಬಲ್‌, ಅನೂಪ್‌ ಜಾರ್ಜ್‌ ಚೌಧರಿ, ರಾಜೀವ್‌ ಧವನ್‌ ಮತ್ತು ಸುಶೀಲ್‌ ಜೈನ್‌ ಅವರು ಸುನ್ನಿ ವಕ್ಫ್ ಬೋರ್ಡ್‌ ಮತ್ತು ನಿರ್ಮೋಹಿ ಅಖಾರ ಸೇರಿದಂತೆ ಇತರ ಪಾರ್ಟಿಗಳ ಪರವಾಗಿ ವಾದಮಂಡಿಸಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಸಿದ್ದರಾಮಯ್ಯ ಸರ್ಕಾರ ಭೃಷ್ಟಾಚಾರ ರಹಿತ ಸರ್ಕಾರ: ದೇವೇಗೌಡರಿಂದ ಪ್ರಶಂಸೆ

ಮುಂದಿನ ಸುದ್ದಿ »

ಬಿಜೆಪಿಗರೇ, ರಾಜ್ಯ ಉಸ್ತುವಾರಿ ವೇಣುಗೋಪಲ್ ತಂಟೆಗೆ ಬಂದರೆ ಸುಮ್ಮನಿರಲ್ಲ!: ಡಿಕೆಶಿ ಎಚ್ಚರಿಕೆ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×