ವಿಶ್ವವಿದ್ಯಾನಿಲಯಗಳ ಪರೀಕ್ಷೆ ರದ್ದು.!

0
37

ನ್ಯೂಸ್ ಕನ್ನಡ ವರದಿ: ಕಾಲೇಜು ಹಾಗೂ ವಿಶ್ವ ವಿದ್ಯಾಲಯಗಳ ಪರೀಕ್ಷೆಯನ್ನು ರದ್ದು ಪಡಿಸಲಾಗಿದೆ ಎಂದು ಪಂಜಾಬ್​ ಸರ್ಕಾರ ಘೋಷಿಸಿದೆ. ಈ ಹಿಂದಿನ ಪರೀಕ್ಷೆಗಳ ಸಾಧನೆಯನ್ನು ಆಧರಿಸಿ ಫಲಿತಾಂಶ ನೀಡಲಾಗುವುದು ಎಂದು ಸಿಎಂ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಹೇಳಿದ್ದಾರೆ.

ಫೇಸ್​ಬುಕ್ ಲೈವ್​​ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸಿಎಂ, ಈ ವಿಷಯ ಪ್ರಕಟಿಸಿದ್ದಾರೆ. ಆದರೆ, ಈಗಾಗಲೇ ಎಲ ವಿವಿಗಳು ಆನ್​ಲೈನ್​ ಮೂಲಕ ಪರೀಕ್ಷೆಗಳನ್ನು ನಡೆಸುತ್ತಿದ್ದು, ಅವುಗಳು ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದರ ಹೊರತಾಗಿಯೂ ತಮ್ಮ ಸಾಧನೆಯನ್ನು ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಕರೊನಾ ಸಂಕಷ್ಟ ಮುಗಿದ ಬಳಿಕ ಪರೀಕ್ಷೆ ತೆಗೆದುಕೊಳ್ಳುವ ಅವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ವಿವಿಗಳು ಹಾಗೂ ಕಾಲೇಜುಗಳು ಸರ್ಕಾರದ ಈ ನಿರ್ಧಾರವನ್ನು ಜಾರಿಗೊಳಿಸಲು ಸಿದ್ಧತೆಗಳನ್ನು ನಡೆಸುತ್ತಿವೆ. ಪರೀಕ್ಷೆಗಳು ರದ್ದಾಗಿದ್ದರೂ ವಿದ್ಯಾರ್ಥಿಗಳು ತಮ್ಮ ಅಭ್ಯಾಸವನ್ನು ಮುಂದುವರಿಸಬೇಕೆಂದು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here