8 ಪೋಲಿಸರನ್ನು ಹತ್ಯೆ ಮಾಡಿದ್ದ ಅಮರ್ ದುಬ್ಬೆ ಎನ್ ಕೌಂಟರ್.!

0
44

ನ್ಯೂಸ್ ಕನ್ನಡ ವರದಿ: ಉತ್ತರ ಪ್ರದೇಶದ ಕಾನ್ಪುರ್ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ನಿಕಟವರ್ತಿಯಾಗಿದ್ದ ಅಮರ್ ದುಬೆಯನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

ಕಾನ್ಪುರ್ ದಲ್ಲಿ ವಿಕಾಸ್ ದುಬೆ ಬಂಧನಕ್ಕೆ ತೆರಳಿದ್ದ ವೇಳೆ ಗುಂಡು ಹಾರಿಸಿ 8 ಪೊಲೀಸರನ್ನು ಹತ್ಯೆ ಮಾಡಲಾಗಿತ್ತು. ಪೊಲೀಸ್ ಠಾಣೆಯಿಂದಲೇ ವಿಕಾಸ್ ದುಬೆಗೆ ಮಾಹಿತಿ ರವಾನೆಯಾಗಿರುವ ಬಗ್ಗೆ ತನಿಖೆ ನಡೆಯುತ್ತಿದೆ. ಆತನಿಗೆ ಸೇರಿದ ಮನೆ ಮತ್ತು ವಾಹನಗಳನ್ನು ಕಾನ್ಪುರ್ ಜಿಲ್ಲಾಡಳಿತ ಧ್ವಂಸಗೊಳಿಸಿದೆ.

ಪೊಲೀಸರ ವಿಶೇಷ ತಂಡ ಕಾರ್ಯಾಚರಣೆ ಕೈಗೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಿದೆ. ಬುಧವಾರ ಬೆಳ್ಳಂಬೆಳಗ್ಗೆ ವಿಕಾಸ್ ದುಬೆ ಸಹಚರ ಅಮರ್ ದುಬೆಯನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ಉತ್ತರಪ್ರದೇಶ ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರಶಾಂತ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here