ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧೆ; ಪತಿ ರಾಬರ್ಟ್ ವಾದ್ರಾ ಹೇಳಿದ್ದೇನು?

0
211

ನ್ಯೂಸ್ ಕನ್ನಡ ವರದಿ (17-4-2019):ನಿನ್ನೆ ಮಾಧ್ಯಮದೊಂದಿಗೆ ಮಾತನಾಡಿದ ಪ್ರಿಯಾಂಕಾರ ಪತಿ ರಾಬರ್ಟ್ ವಾದ್ರಾ ಅವರು, ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಿಯಾಂಕಾ ಒಪ್ಪಿಕೊಂಡಿದ್ದಾರೆ. ಆದರೆ ಈ ಬಗ್ಗೆ ಪಕ್ಷ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.ಪ್ರಿಯಾಂಕಾ ಗಾಂಧಿ ಸಹ ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು, ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಒಪ್ಪಿಗೆ ನೀಡಬೇಕಿದೆ.

2014ರಲ್ಲಿ ಪ್ರಧಾನಿ ಅಭ್ಯರ್ಥಿಯಾಗಿದ್ದ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭೆಯಿಂದ ಮೊದಲ ಬಾರಿಗೆ ಸ್ಪರ್ಧಿಸಿದ್ದರು. ಮೋದಿಗೆ ಎದುರಾಗಿ ಎಎಪಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಸ್ಪರ್ಧಿಸಿದ್ದು 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಮೋದಿ ವಿರುದ್ಧ ಸೋತಿದ್ದರು. ಈಗ ಪ್ರಿಯಾಂಕರು ಸ್ಪರ್ಧಿಸಲಿದ್ದಾರೆಯೇ ಎಂದು ಕಾದು ನೋಡಬೇಕಿದೆ. ಈ ಹಿಂದೆ ಪ್ರಿಯಾಂಕರು ಅಮೇಠಿಯಲ್ಲಿ ಕಾರ್ಯಕರ್ತರ ಬಳಿ ಈ ಇಂಗಿತ ವ್ಯಕ್ತ ಪಡಿಸಿದ್ದರು.

LEAVE A REPLY

Please enter your comment!
Please enter your name here