ವಿಶ್ವಕಪ್ ಕ್ರಿಕೆಟ್: ಪಾಕಿಸ್ತಾನದ ವಿರುದ್ಧ ಬೃಹತ್ ಮೊತ್ತ ಪೇರಿಸಿದ ಭಾರತ ತಂಡ!

0
292

ನ್ಯೂಸ್ ಕನ್ನಡ ವರದಿ: (16.06.19): ಹಲವಾರು ದಿನಗಳಿಂದ ಜನರು ಕಾತರದಿಂದ ಕಾಯುತ್ತಿದ್ದ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವಿನ ವಿಶ್ವಕಪ್ ನ ಮೊದಲ ಪಂದ್ಯಾಟವು ಇಂದು ಲಂಡನ್ ನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಪಾಕಿಸ್ತಾನ ತಂಡವು ಭಾರತ ತಂಡವನ್ನು ಬ್ಯಾಟಿಂಗ್ ಗೆ ಇಳಿಸಿತು. ಆರಂಭದಲ್ಲೇ ರೋಹಿತ್ ಶರ್ಮಾ ಹಾಗೂ ಕೆ.ಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಮೂಲಕ ಭದ್ರ ಬುನಾದಿ ಹಾಕಿದರು. ಸದ್ಯ ಭಾರತ ತಂಡವು 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 336 ರನ್ ಗಳನ್ನು ಬಾರಿಸಿದೆ. ಈ ಮೂಲಕ ಪಾಕಿಸ್ತಾನ ತಂಡಕ್ಕೆ ಬೃಹತ್ ಮೊತ್ತದ ಗುರಿಯನ್ನು ನೀಡಿದೆ.

ಆರಂಭಿಕ ಬ್ಯಾಟ್ಸ್ ಮನ್ ಗಳಾದ ರೋಹಿತ್ ಶರ್ಮಾ ಹಾಗೂ ಕೆ.ಎಲ್ ರಾಹುಲ್ ಭರ್ಜರಿ ಪ್ರದರ್ಶನ ನೀಡಿ ಭದ್ರ ಬುನಾದಿಯನ್ನು ಹಾಕಿದರು. ರಾಹುಲ್ 57 ರನ್ ಗಳನ್ನು ಬಾರಿಸಿದರೆ ರೋಹಿತ್ ಶರ್ಮಾ ಆಕರ್ಷಕ ಶತಕದ ಮೂಲಕ 140 ರನ್ ಬಾರಿಸಿದರು. ಬಳಿಕ ನಾಯಕ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ತೋರಿ 77 ರನ್ ಗಳಿಸುವಲ್ಲಿ ಸಫಲರಾದರು. ಬಳಿಕ ಹಾರ್ದಿಕ್ ಪಾಂಡ್ಯಾ ಬಿರುಸಿನ ಆಟ ತೋರಿದರಾದರೂ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ. ಪಾಕಿಸ್ತಾನದ ಪರ ಮುಹಮ್ಮದ್ ಅಮೀರ್ ಮೂರು ವಿಕೆಟ್ ಗಳಿಸಿ ಉತ್ತಮ ಬೌಲಿಂಗ್ ಪ್ರದರ್ಶನ ತೋರಿದರು.

LEAVE A REPLY

Please enter your comment!
Please enter your name here