ಬೈಎಲೆಕ್ಷನ್ ಗೆಲ್ಲಲು ಬಿಜೆಪಿ ಪ್ರತಿ ಕ್ಷೇತ್ರಕ್ಕೂ 100 ಕೋಟಿ ಖರ್ಚು ಮಾಡಿದ್ದಾರೆ

0
19

ನ್ಯೂಸ್ ಕನ್ನಡ ವರದಿ: ಬಿಜೆಪಿಯವರು ಒಂದೊಂದು ಕ್ಷೇತ್ರಕ್ಕೂ 100 ಕೋಟಿ ರೂ. ಹಣ ಖರ್ಚು ಮಾಡಿ ಕರ್ನಾಟಕದಲ್ಲಿ ನಡೆದ ಉಪಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,ಕರ್ನಾಟಕದಲ್ಲಿ ನಡೆದ 15 ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿಯವರು ಒಂದೊಂದು ಕ್ಷೇತ್ರದಲ್ಲಿ 100 ಕೋಟಿ ರೂ.ಗೂ ಅಧಿಕ ಹಣ ಖರ್ಚು ಮಾಡಿ ಚುನಾವಣೆ ಗೆದ್ದಿದ್ದಾರೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಇಷ್ಟು ದಿನಗಳೇ ಕಳೆದರೂ ಇನ್ನೂ ಟೇಕ್ ಆಫ್ ಆಗಿಲ್ಲ. ಸರ್ಕಾರದ ಎಷ್ಟೋ ಖಾತೆಗಳಿಗೆ ಸಚಿವರೇ ಇಲ್ಲ. ಎಲ್ಲ ಖಾತೆಗಳನ್ನು ಸಿಎಂ ಅವರೇ ಇಟ್ಟುಕೊಂಡಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಡಿಯೂರಪ್ಪ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

LEAVE A REPLY

Please enter your comment!
Please enter your name here